ಬೆಂಗಳೂರು: ಒಂದಲ್ಲೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವುದರ ಮೂಲಕ ಸುದ್ದಿಯಲ್ಲಿರುವ ಸಚಿವ ಝಮೀರ್ ಅಹ್ಮದ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ನೀಡಿರುವುದು ತಿಳಿದುಬಂದಿದೆ.
ಹೈಕೋರ್ಟ್ ನೀಡಿರುವ ತೀರ್ಪನ್ನು ಪೊಲಿಟಿಕಲ್ ಜಡ್ಜ್ ಮೆಂಟ್ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಸಚಿವ ಝಮೀರ್ ವಿರುದ್ಧ ನ್ಯಾಯಾಂಗದ ತೀರ್ಪನ್ನು ಪ್ರಶ್ನಿಸಿ, ನಿಂದನೆ ಮಾಡಿರುವ ಪ್ರಕರಣದಡಿ ದೂರನ್ನು ದಾಖಲಿಸುವಂತೆ ಅಡ್ವೋಕೆಟ್ ಜನರಲ್ ಶಶಿಕಿರಣ್ ಶೆಟ್ಟಿಗೆ ಟಿ ಜೆ ಅಬ್ರಹಾಂ ತಿಳಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿಯನ್ನು ನೀಡಿತ್ತು. ಆದ್ದರಿಂದ ಝಮೀರ್ ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್ ಮೆಂಟ್ ಎನ್ನುವುದರ ಮೂಲಕ ವಿವಾದವನ್ನು ಸೃಷ್ಟಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.