ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆಯನ್ನು ನಿಲ್ಲಿಸುತ್ತೇವೆ ಎಂದು ರಾಜ್ಯದ ಜನತೆಗೆ ಡಿಕೆಶಿವಕುಮಾರ್ ಸ್ಪಷ್ಟನೆಯನ್ನ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಶಕ್ತಿ ಯೋಜನೆಯ ಬಗ್ಗೆ ನನ್ನ ಹೇಳಿಕೆಯನ್ನು ತಿರುಚಲಾಗಿದೆ, ಶಕ್ತಿ ಯೋಜನೆಯನ್ನು ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ನಾನು ಹೇಳಿಲ್ಲ.ಕೆಲವು ಮಹಿಳೆಯರು ಟಿಕೆಟ್ ಪಡೆಯಲು ದುಡ್ಡು ಕೊಟ್ಟು ಪ್ರಯಾಣ ಮಾಡುತ್ತವೆಂದು ಹೇಳಿರುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದಷ್ಟೇ ಹೇಳಿದ್ದೇನೆ .
ಟಿಕೆಟ್‌ಗೆ ದುಡ್ಡು ಕೊಟ್ಟು ಪ್ರಯಾಣ ಮಾಡುತ್ತೇವೆ ಎಂದರೂ ಕಂಡಕ್ಟರ್ ಹಣವನ್ನು ಪಡೆಯುತ್ತಿಲ್ಲ ಎಂದು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡುತ್ತಿರುವ ಮಹಿಳೆಯರ ಅಭಿಪ್ರಾಯದ ಬಗ್ಗೆ ಚರ್ಚೆಯನ್ನು ಮಾಡೋಣ ದಷ್ಟೇ ಹೇಳಿದ್ದೆನೆ ಎಂದು ಡಿಸಿಎಂ ಡಿಕೆಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.