ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು (ಬುಧವಾರ ) ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು 24 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ .
ಕೆಲವು ಕಡೆ ಅಲ್ಲಲ್ಲಿ ಸಣ್ಣಪುಟ್ಟ ಗದ್ದಲ ಗಲಾಟೆಗಳು ನಡೆದಿರುವುದು ಬಿಟ್ಟರೆ ಯಥಾಪ್ರಕಾರ ಸಮಾದಾನಕರವಾಗಿ, ಶಾಂತವಾಗಿ ಮತದಾನ ನಡೆಯುತ್ತಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಹಂತದ ಮತದಾನ ಬಿರುಸಾಗಿ ನಡೆಯುತ್ತಿದ್ದು 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರ ಮಾಡಲು ಸುಮಾರು 7.14 ಲಕ್ಷಕ್ಕಿಂತ ಹೆಚ್ಚು ಜನರು ಮತದಾನವನ್ನು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.