ಬೆಂಗಳೂರು: ಧರ್ಮಸ್ಥಳ ವಿರುದ್ದ ನಡೆದ ಪಿತೂರಿಯಲ್ಲಿ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ನೇರ ಆರೋಪ ಮಾಡಿರುವ ಜನಾರ್ಧನ ರೆಡ್ಡಿ ವಿರುದ್ದ ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸಂಸದರು-ಶಾಸಕರ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಷೇಶ ಮ್ಯಾಜಿಸ್ಟೇಟ್ ನ್ಯಾಯಾಲಯದಲ್ಲಿ ಕೇಸನ್ನು ದಾಖಲಿಸಿದ್ದಾರೆ. ಇದನ್ನು ಪರಿಶೀಲಿಸಿದ ನ್ಯಾಯಾಧೀಶರು ಸೆ.11ಕ್ಕೆ ವಿಚಾರಣೆಯ ದಿನಾಂಕವನ್ನು ನಿಗದಿ ಮಾಡಿದ್ದಾರೆ.
ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ ನಂತರ ಮಾತನಾಡಿದ ಸಸಿಕಾಂತ್ ಸೆಂಥಿಲ್, ನನ್ನ ವಿರುದ್ದ ಆಧಾರವಿಲ್ಲದೆ ಆರೋಪವನ್ನು ಮಾಡುತ್ತಿದ್ದಾರೆ. ರಾಜಕೀಯ ದುದ್ದೇಶದಿಂದಲೇ ನನ್ನನ್ನು ಟಾರ್ಗೆಟ್ ಮಾಡಿ ಆರೋಪಿಸಿದ್ದಾರೆ. ನ್ಯಾಯಾಲಯದಲ್ಲಿ ಉತ್ತರ ಕೊಡಲಿ ಎಂದು ಹೇಳಿದ್ದಾರೆ.
