ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಮಾತುಗಳು ಆಗಾಗ ಕೇಳಿಬರುತ್ತಿವೆ. ಸ್ವಪಕ್ಷದ ನಾಯಕರೇ ಅಲ್ಲಲ್ಲಿ ಚರ್ಚೆಯನ್ನು ಮಾಡುತ್ತಿದ್ದಾರೆ. ಇದರ ನಡುವೆ ಜನವರಿ ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರವನ್ನು ವಹಿಸಿಕೊಂಡಾಗಿನಿಂದಲೂ ಟೈಮ್ ವೆಸ್ಟ್ ಮಾಡಿಕೊಂಡು ಬಂದಿದೆ. ಸ್ವಪಕ್ಷದವರೇ ನವೆಂಬರ್ ಕ್ರಾಂತಿಯನ್ನು ಮಾಡುತ್ತಿದ್ದಾರೆ.ಸಿಎಂ ಯಾರಾಗ್ತಾರೆ ಎಂಬ ಚರ್ಚೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಅವರವರಲ್ಲಿಯೇ ಗೊಂದಲಗಳಿದ್ದು, ಒಬ್ಬೊಬ್ಬರು ಒಂದೊಂದು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದಾರೆ. ಆದ್ದರಿಂದ ಮಧ್ಯಂತರ ಚುನಾವಣೆಗೆ ನಾವು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟವನ್ನು ನಡೆಸುತ್ತಿದ್ದಾರೆ.ಅವರು ಬೇಡಿಕೆಗೆ ಸ್ಪಂಧಿಸದ ಸರ್ಕಾರ ಸಕ್ಕರೆ ಕಾರ್ಖಾನೆಯ ಮಾಲೀಕರ ಜೊತೆ ಮಾತನಾಡಿ ರೈತರಿಗೆ ಪರಿಹಾರ ನೀಡುತ್ತಿಲ್ಲ. ರಾಜ್ಯ ಸರ್ಕಾರದವರಿಗೆ ಕಾರ್ಮಿಕರು, ರೈತರ ಅಭಿವೃದ್ದಿಯ ಬಗ್ಗೆ ಯೋಚನೆ ಮಾಡುತ್ತಿಲ್ಲ. ಬದಲಾಗಿ ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ.ಈ ಸರ್ಕಾರ ಯಾವಾಗ ಬೀಳುತ್ತದೆ ಎಂಬುದನ್ನು ಕಾದುನೋಡಬೇಕಿದೆ ಎಂದು ರಾಜ್ಯಸರ್ಕಾರವನ್ನು ಟೀಕಿಸಿದ್ದಾರೆ.
