ಮಡಿಕೇರಿ: ಮುಡಾಹಗರಣದಲ್ಲಿ 5000ಕೋಟಿ ರೂಗಳಷ್ಟು ಅವ್ಯವಹಾರ ನಡೆದಿದೆ ಎಂದು ಅರಕಲಗೂಡು ವಿದಾನಸಭೆ ಕ್ಷೇತ್ರದ ಜೆಡಿಎಸ್‌ ಶಾಸಕ ಎ ಮಂಜು ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.

ಕೊಡಗಿನ ಕುಶಾಲನಗರದಲ್ಲಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಯಾಗಿ ಎಲ್ಲಾ ಸತ್ಯಗಳು ಹೊರಬರಬೇಕು. ಹಾಗೇ ನಡೆದಾಗ ಮಾತ್ರ ನ್ಯಾಯ ಸಿಗುತ್ತದೆ.ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ಎಫ್‌ಐಆರ್‌ ಆದ ನಂತರ ರಾಜೀನಾಮೆ ನೀಡಬೇಕಲ್ಲ ಯಾಕೆ ನೀಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆಯೂ ರಾಮಕೃಷ್ಣ ಹೆಗಡೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೇಲೆಯೂ ಆರೋಪ ಕೇಳಿಬಂದಾಗ ಅವರೆಲ್ಲಾರಾಜೀನಾಮೆ ನೀಡಿದ್ದರು.ಇದೀಗ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಎ ಮಂಜು ಆಗ್ರಹಿಸಿದ್ದು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ತಪ್ಪಿಲ್ಲವೆಂದು ಸಾಬೀತಾದರೆ ಮತ್ತೆ ಅಧಿಕಾರವನ್ನು ಮುಂದುವರೆಸಲಿ ಅಲ್ಲಿಯವರೆಗೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *