ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ.ತಿರುಮಲೇಶ್ ತಮ್ಮ 82ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಹೈದರಾಬಾದ್‌ನಲ್ಲಿರುವ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ, ಹೃದಯದ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು.
1940, ಸೆಪ್ಟೆಂಬರ್‌ 12ರಂದು ಕಾಸರಗೋಡಿನ ಕಾರಡ್ಕ ಗ್ರಾಮದಲ್ಲಿ ಜನಿಸಿದ ಕೆ.ವಿ. ತಿರುಮಲೇಶ್ ಕನ್ನಡದ ಪ್ರಮುಖ ಕವಿ, ಕತೆಗಾರರಲ್ಲಿ ಒಬ್ಬರು. ಅಲ್ಲದೆ, ಇವರು ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕ ಕೂಡಾ ಆಗಿದ್ದರು.


ಇವರ ʼಅಕ್ಷಯ ಕಾವ್ಯʼ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ. ಒಂಬತ್ತು ಕವನ ಸಂಕಲನ, ಹಲವಾರು ಕಥಾ ಸಂಕಲ ಮತ್ತು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.
ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಆಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು ನಿವೃತ್ತಿ ಹೊಂದಿದ್ದ ಅವರು ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *