ರಾಮನಗರ: ಚಲನಚಿತ್ರ ನಿರ್ದೆಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ವಿಷಯ ತಿಳಿದು ತುಂಬಾ ನೋವಾಗಿದೆ.ಕನ್ನಡ ಚಿತ್ರರಂಗವೂ ಪ್ರತಿಭಾವಂತ, ಕ್ರೀಯಾಶೀಲ ನಿರ್ದೇಶಕನನ್ನು ಕಳೆದುಕೊಂಡು ಬಹು ದೊಡ್ಡ ನಷ್ಟಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪವನ್ನು ಸೂಚಿಸಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ದೇಶಕ ಗುರುಪ್ರಸಾದ್ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಕನ್ನಡ ಚಲನಚಿತ್ರದ ವಲಯ ತುಂಬಾ ಸಂಕಷ್ಟದಲ್ಲಿದೆ. ನಿರ್ದೇಶಕರು, ನಿರ್ಮಾಪಕರು, ಹೆಚ್ಚು ಆರ್ಥಿಕ ಸಂಕಷ್ಟಗಳನ್ನು ಎದುರಿಸುತತಿದ್ದಾರೆ. ಹಾಗೇಯೇ ಯಾವ ಯಾವ್ದೋ ಸಮಸ್ಯೆಗಳಿಗೆ ಸಿಲುಕಿಕೊಂಡು ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳುತಿರುವುದನ್ನು ನೋಡಿದರೇ ದೊಡ್ಡ ದುರಂತವೇ ಸರಿ.ಎಂತದೆ ಸಮಸ್ಯೆಯ ಸುಳಿಗೆ ಸಿಲುಕಿದರೂ ಎಲ್ಲವನ್ನೂ ಧೈರ್ಯವಾಗಿ ಎದುರಿಸಬೇಕು. ಅದನ್ನು ಬಿಟ್ಟು ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.