ಕನ್ನಡದ ಸಾಹಿತಿ ಎಸ್. ಎಲ್.‌ ಭೈರಪ್ಪನವರ ಅಂತ್ಯ ಸಂಸ್ಕಾರವನ್ನು ಮೈಸೂರಿನಲ್ಲಿ   ನಾಡಿದ್ದು, ನೆರವೇರಿಸಲು ಕುಟುಂಬದವರು ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸ್. ಎಲ್.‌ ಭೈರಪ್ಪನವರ ಅಂತ್ಯ ಸಂಸ್ಕಾರವನ್ನು ನಾಡಿದ್ದು ನೆರವೇರಿಸಲಿದ್ದು, ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನದ ವ್ಯವಸ್ಥೆಯನ್ನು ಮಾಡಲಾಗಿದೆ.ಎಂದು ಮೂಲಗಳುತಿಳಿಸಿವೆ.

ಎಸ್. ಎಲ್.‌ ಭೈರಪ್ಪನವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ನಗರದ ಖಾಸಗಿ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಕಾರಣ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಎಸ್. ಎಲ್.‌ ಭೈರಪ್ಪನವರು ಸಾಹಿತ್ಯ ಲೋಕದಲ್ಲಿ ತಮ್ಮ ಅದ್ಬುತವಾದ ಬರವಣಿಗೆಯಿಂದ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ಇವರ ಕೊಡುಗೆಯು ಅಪಾರ. ಇವರ ಕಾದಂಬರಿಗಳು ಬೇರೆ ಬೇರೆ ಭಾಷೆಗಳಿಗೆ ಅನುವಾದವಾಗಿವೆ. ಇವರು ಇನ್ನಷ್ಟು ಹೊಸ ಪ್ರತಿಭೆಗಳಿಗೆ ಸ್ಪೂರ್ತಿಯಾಗಿದ್ದರು ಆದರೆ ಅವರ ಅಗಲಿಕೆಯಿಂದ ಸಾಹಿತ್ಯಲೋಕ ಬಡವಾಗಿದೆ. ಇವರ ನಿಧನಕ್ಕೆ ಹಲವು ಗಣ್ಯ ವ್ಯಕ್ತಿಗಳು ಸಂತಾಪವನ್ನು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *