ಬೆಂಗಳೂರು: ಕನ್ನಡದ ಸಾಹಿತ್ಯ ಲೋಕವನ್ನು ಸಮೃದ್ದಗೊಳಿಸಿರುವ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪನವರು ವಯೋಸಹಜವಾಗಿ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಹಲವು ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.
ಎಸ್. ಎಲ್.ಭೈರಪ್ಪನವರ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನದ ವಾರ್ತೆ ನಮಗೆ ತುಂಬಾ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು.
