ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ನೀಡಿರುವ ನೋಟಿಸ್‌ನ ವಿಚಾರವಾಗಿ ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ ಅವರು ಕೇಳ:ದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ.ಲೋಕಾಯುಕ್ತ ಅಧಿಕಾರಿಗಳು ನನ್ನ ಉತ್ತರಗಳನ್ನು ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದರ ಮೇಲೆ ವಿಚಾರಣೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿಯವರ ಒಂದು ಪ್ರಕರಣವನ್ನಾದರೂ ಸಿಬಿಐಗೆ ಒಪ್ಪಿಸಿದ್ದಾರಾ? ಎಂದು ಬಿಜೆಪಿ ಪಕ್ಷದ ನಾಯಕರು ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆಯನ್ನ ನೀಡಿದರು. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಾ ಬರೀ ಸುಳ್ಳುಗಳನ್ನು ಹೇಳುತ್ತಾ ಬಂದಿದ್ದಾರೆ.ಬಿಜೆಪಿಯವರಿಗೆ ಕಾನೂನಿನ ಮೇಲೆ ಗೌರವವಿಲ್ಲ.ಸಿಬಿಐ ಯಾರ ಕೈನಲ್ಲಿದೆ ಎಂದು ಬಿಜೆಪಿಗರಿಗೆ ಪ್ರಶ್ನೆ ಮಾಡಿದ್ದಾರೆ.