ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಜೈಲಧಿಕಾರಿಗಳು ಖೈದಿ ನಂಬರನ್ನು ನೀಡಿರುವುದು ತಿಳಿದುಬಂದಿದೆ.
ಇತ್ತೀಚೆಗೆ ಮಹಿಳೆಯೊಬ್ಬರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಮುನಿರತ್ನರನ್ನು ಬಂಧಿಸಲಾಗಿತ್ತು.ಹೌದು ಶಾಸಕ ಮುನಿರತ್ನಗೆ ಜೈಲಿನ ಅಧಿಕಾರಿಗಳ ವಿಚಾರಣಾಧೀನ ಕೈದಿ ನಂಬರ್-9273 ನೀಡಿದ್ದಾರೆ ಎನ್ನಲಾಗಿದೆ.
ಈ ಪ್ರಕರಣಕ್ಕೂ ಮೊದಲು ಜೀವಬೆದರಿಕೆ- ಜಾತಿ ನಿಂದನೆ ಮಾಡಿದಂತಹ ಶಾಸಕರು ಅಟ್ರಾಸಿಟಿ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರದ ಜೈಲಿನಿಂದ ಬಿಡುಗಡೆಯಾದ ದಿನವೇ ಮತ್ತೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದರು.ಸದ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವೂ ಸೆ.25ಕ್ಕೆ ವಿಚಾರಣೆಯನ್ನು ಮುಂದೂಡಿದೆ.