ಇತ್ತೀಚೆಗೆ ರಾಜಕೀಯ ರಂಗದಲ್ಲಿ ಮುಡಾ ಸುದ್ದಿಯೇ ಹೆಚ್ಚು ಸದ್ದು ಮಾಡುತ್ತಿತ್ತು.ಇದೀಗ ಮುಡಾ ಹಗರಣದ ತನಿಖೆಯನ್ನು ಇಡಿ ಅಧಿಕಾರಿಗಳು ಚುರುಕುಗೊಳಿಸಿದ್ದು ಮುಡಾ ಮಾಜಿ ಅಧ್ಯಕ್ಷ ಮರೀಗೌಡ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಬೆಂಗಳೂರಿನ ಇಡಿ ಆಫೀಸ್‌ಗೆ ಮುಡಾ ಮಾಜಿ ಅಧ್ಯಕ್ಷ ಹಾಜರಾಗಿದ್ದು, ಸಿಎಂ ಸಿದ್ದರಾಮಯ್ಯನವರ ಪತ್ನಿಗೆ ಸೈಟ್ ಹಂಚಿಕೆ ಮಾಡಿರುವ ಬಗ್ಗೆ ತನಿಖೆ ನಡೆಯುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗಿದೆ.
ಮುಡಾ ಅಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಲೋಕಾಯುಕ್ತ ಅಧಿಕಾರಿಗಳ ತನಿಖೆಗೆ ಹಾಜರಾಗಿದ್ದಾರೆ.ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಯನ್ನು ನಡೆಸಿದ್ದಾರೆ.