ರಾಮನಗರ: ರಾಜ್ಯದದಲ್ಲಿ ಅತೀ ಶೀಘ್ರದಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಿಸಲಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಶಾಕ್ ನೀಡಿದ್ದಾರೆ.
ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿಯವರು ನಮ್ಮ ವಿರುದ್ದ ಪ್ರತಿಭಟನೆ ಮಾಡ್ತಾರೆ. ಹಾಗಂತ ರೈತರ ಶ್ರಮಕ್ಕೆ ತಕ್ಕ ಬೆಲೆಯನ್ನು ನೀಡುವುದು ಬೇಡವೇ? ಹೈನುಗಾರಿಕೆ ಎಷ್ಟು ಶ್ರಮದಾಯಕ ಕೆಲವೆಂಬುದು ಗೊತ್ತೇ? ಎಂದು ಪ್ರಶ್ನಿಸಿದ್ದಾರೆ.
ಹಾಲಿನ ಬೆಲೆ ಪ್ರತಿ ಲೀಟರ್ಗೆ 5ರೂಗಳನ್ನು ಹೆಚ್ಚಿಸಲಾಗುತ್ತದೆ. ಇದರಿಂದ ರೈತರ ಮೇಲಿರುವ ಹೊರೆ ಕಡಿಮೆಯಾಗುತ್ತದೆ.ರೈತರನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರವನ್ನು ಹೆಚ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.