ಬಾ ಗೆಳತಿ
ಚೂರಾದ ಮುಖಗಳನು ಆಯೋಣ
ಎಲ್ಲಾದರೂ
ನಗು ಮೆತ್ತಿಕೊಂಡಿದ್ದರೆ
ನಮ್ಮ ತುಟಿಗಳಿಗೆ ತುಂಬಿಕೊಳ್ಳೋಣ..

ಎಲ್ಲಾದರೂ
ಅಳು ಅಂಟಿಕೊಂಡಿದ್ದರೆ
ನಮ್ಮ ಕಣ್ಣುಗಳಿಗೆ ಬಸಿದುಕೊಳ್ಳೋಣ..

ಬಾ ಗೆಳತಿ
ಚೂರಾದ ಎದೆಗಳನು ಆಯೋಣ
ಎಲ್ಲಾದರೂ ಹದವಿದ್ದರೆ ಅಲ್ಲಿ ಬೀಜಗಳಾಗಿ ಮೊಳೆಯೋಣ..

~ ಎನ್.ಕೆ. ಹನುಮಂತಯ್ಯ

Leave a Reply

Your email address will not be published. Required fields are marked *