ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮೀಡಿಯಂ ಶಾಲೆಗಳಲ್ಲಿ ಮಲೆಯಾಳಂ ಭಾಷೆ ಕಡ್ಡಾಯ ಮಾಡಲು ಮುಂದಾಗಿರುವ ಸರ್ಕಾರದ ವಿರುದ್ದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿರುವುದು ಕೇಳಿಬಂದಿದೆ.

ನಗರದಲ್ಲಿಂದು ಮಾತನಾಡಿದ ಅವರು, ಕೇರಳದಲ್ಲಿ ಮಲೆಯಾಳಂ  ಭಾಷೆಯನ್ನು ಕಡ್ಡಾಯಗೊಳಿಸಿದರೆ ಯಾವುದೇ ಸಮಸ್ಯೆಯಿಲ್ಲ. ಆದರೆ ಗಡಿಭಾಗದಲ್ಲಿರುವ ಕನ್ನಡ ಮೀಡಿಯಂ ಶಾಲೆಗಳ ಮೇಲೆ ಮಲೆಯಾಳಂ ಭಾಷೆಯನ್ನು ಕಡ್ಡಾಯ ಮಾಡ್ಬಾರ್ದು.ಕೇವಲ ಎಲೆಕ್ಷನ್‌ ವಿಚಾರಕ್ಕೆ ಭಾಷಾ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೋಗಿಲು ಲೇಔಟಿನಲ್ಲಿ ಅಕ್ರಮ ಮನೆಗಳನ್ನು ತೆರವು ಮಡಿರುವ ಪ್ರಕರಣದಲ್ಲಿ ಕೇರಳ ಸಿಎಂ ಟ್ವೀಟ್‌ ಮೂಲಕ ಕೇರಳ ಸರ್ಕಾರ ಕರ್ನಾಟಕ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಕೇರಳ ಸರ್ಕಾರದ ಒತ್ತಡಕ್ಕೆ ಕಾಂಗ್ರೆಸ್‌ ಮಣಿಯುತ್ತಿದೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *