ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಮೀನನ್ನು ತೆಗೆದುಕೊಂಡಿದೆ. ಈ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವ ಆರೋಪ ಮಾಡಿದ್ದಾರೆ
ಈ ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ಕೆಳಗಿಳಿಸಿ ವಶಪಡಿಸಿಕೊಂಡಿರುವ ಜಮೀನನ್ನು ಮತ್ತೆ ವಾಪಸ್ ಪಡೆದುಕೊಳ್ಳಬೆಕೆಂದು ಆಗ್ರಹಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಖುದ್ದು ಭೇಟಿ ಮಾಡಿ ದೂರನ್ನು ನೀಡಿದ್ದಾರೆ.
ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಒಂದು ಕುಟುಂಬಕ್ಕೆ ಸೀಮಿತವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಧಾಕೃಷ್ಣ ಎನ್ನುವವರ ಹೆಸರಿನಲ್ಲಿ ಈ ಟ್ರಸ್ಟ್ ಇದ್ದು, ಕಲಬುರಗಿಯಲ್ಲಿ ಟ್ರಸ್ಟ್ ನೋಂದಣಿಯನ್ನ ಮಾಡಲಾಗಿದೆ. ದಲಿತರು ಎಂದರೆ ಪ್ರಿಯಾಂಕ್ ಖರ್ಗೆ ಕುಟುಂಬವಲ್ಲ ಎಂದು ನಾರಾಯಣಸ್ವಾಮಿ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.