ನವದೆಹಲಿ: ಈ ಬಾರಿ ನಡೆಯಲಿರುವ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್(ಆರ್ ಆರ್ ) ತಂಡಕ್ಕೆ ಮುಖ್ಯ ಕೋಚ್ ಆಗಿ ರಾಹುಲ್‌ದ್ರಾವಿಡ್‌ರವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಇಂಡಿಯಾ ಟೀಂನೊಂದಿಗೆ ತಮ್ಮ ಅವಧಿಯನ್ನು ಕೊನೆಗೊಳಿಸಿದ ರಾಹುಲ್ ದ್ರಾವಿಡ್‌ರವರು ವೆಸ್ಟ್ ಇಂಡೀಸ್ ಹಾಗೂ ಯುಎಸ್‌ಎನಲ್ಲಿ ನಡೆದ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಪಡೆದುಕೊಳ್ಳುವುದರ ಮೂಲಕ ತಮ್ಮ ಅಧಿಕಾರದಾವಧಿಯನ್ನು ಪೂರ್ಣಗೊಳಿಸಿದ್ದಾರೆ ಎನ್ನಲಾಗಿತ್ತು.