ಬೆಂಗಳೂರು: ಪ್ರಧಾನಿ ಮೋದಿಯವರು ಮತಗಳ್ಳತನ ಮಾಡಿ ಪ್ರಧಾನ ಮಂತ್ರಿಯಾಗಿದ್ದಾರೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದು, ಬಿಜೆಪಿ ಮತಗಳ್ಳತನ ಮಾಡಿರುವುದನ್ನು ಸಾಬೀತು ಮಾಡಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಳೆದ ಎಲೆಕ್ಷನ್‌ನಲ್ಲಿ ನಾವು ಸಂವಿದಾನ ಉಳಿಸುವ ಕಾರ್ಯಗಳನ್ನು ಮಾಡಿದ್ದೇವೆ.ಸಂವಿಧಾನ ಪುಸ್ತಕದಲ್ಲಿ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ಹೇಳಿದ್ದಾರೆ. ಸಂವಿಧಾನವೂ ಒಬ್ಬರಿಗೆ ಒಂದೇ ಮತದ ಹಕ್ಕನ್ನು ನೀಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮೋದಿಯವರು ಸಂವಿಧಾನದ ಮೇಲೆ ಆಕ್ರಮಣವನ್ನು ಮಾಡಿ ಅದನ್ನು ಮುಗಿಸುವ ಷಡ್ಯಂತ್ರವನ್ನು ಮಾಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

Leave a Reply

Your email address will not be published. Required fields are marked *