ಪ್ರಧಾನಿ ಮತ್ತು ಅವರ ತಾಯಿಯನ್ನು ಅವಹೇಳನ ಮಾಡಿದ ರಾಹುಲ್ ಗಾಂಧಿಯವರ ಆರೋಪಗಳನ್ನು ಕೇಂದ್ರ ಸಚಿವ ಅಮಿತ್ ಶಾ ಖಂಡಿಸಿದ್ದಾರೆ.
ಬಿಹಾರದಲ್ಲಿ ನಡೆದ ಇಂಡಿಯಾ ಬ್ಲಾಕ್ ಕಾರ್ಯಕ್ರಮದ ಕುರಿತು ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಅವರ ತಾಯಿಯ ವಿರುದ್ದ ಅವಹೇಳನಕಾರಿ ಪದಗಳನ್ನು ಬಳಸುವುದರ ಮೂಲಕ ಪ್ರಧಾನಿಗೆ ಅವಮಾನ ಮಾಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ ಎಲ್ಲಾ ಕಾಂಗ್ರೆಸ್ ನಾಯಕರು ಕೂಡಾ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
ಮೋದಿಯವರ ತಾಯಿ ಬಡಕುಟುಂಬದಲ್ಲಿದ್ದರೂ ಮಕ್ಕಳನ್ನು ತುಂಬಾ ಚೆನ್ನಾಗಿ ಸಾಕಿ-ಸಲುಹಿ ದೇಶಕ್ಕೆ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆಸಿದ್ದಾರೆ. ಆ ತಾಯಿಯ ಬಗ್ಗೆ ಈ ರೀತಿಯ ಮಾತುಗಳನ್ನಾಡುವುದು ಭಾರತದ ಜನತೆ ಒಪ್ಪುವುದಿಲ್ಲ. ನಾನು ಅದನ್ನು ಖಂಡಿಸುತ್ತೇನೆ ಎಂದಿದ್ದಾರೆ.
