ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಿ.ವೈ.ವಿಜಯೇಂದ್ರ ಮತ್ತು ರಮೇಶ್ ಜಾರಕಿಹೊಳಿ ನಡುವೆ ಸಂಘರ್ಷಗಳು ನಡೆಯುತ್ತಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್.ಅಶೋಕ್ ಅವರಿಬ್ಬರ ಜಗಳದಲ್ಲಿ ಸಾಸಿವೆ ಕಾಳಿನಷ್ಟೂ ನಮ್ಮ ಪಾತ್ರವಿಲ್ಲವೆಂದಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ, ಬಿ.ವೈ.ವಿಜಯೇಂದ್ರ, ಬಸವನಗೌಡ ಯತ್ನಾಳ್ ಕೇಂದ್ರ ನಾಯಕರ ಜೊತೆಯಲ್ಲಿ ವಿಶ್ವಾಸದಿಂದಿದ್ದಾರೆ.ಅವರ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.