ಬೆಂಗಳೂರು: ಸತತ 140 ದಿನಗಳ ಕಾಲ ಜೈಲಿನಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.
ಬೇನ್ನುನೋವಿನ ಚಿಕಿತ್ಸೆ ಪಡೆಯಲು ಅವಕಾಶವನ್ನು ನೀಡುವಂತೆ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿಯವರಿದ್ದ ಏಕಸದಸ್ಯ ಪೀಠ ಇಂದು ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್ ಪರ ವಾದ ಮಾಡಿರುವ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಆರೋಗ್ಯ ಸಮಸ್ಯೆಯನ್ನು ಮಂಡಿಸಿದ್ದರು.ಬೆನ್ನು ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್ನಿಗೆ ಶಸ್ತ್ರ ಚಿಕಿತ್ಸೆ ಮಾಡಿಸದಿದ್ದರೆ ದೊಡ್ಡ ಸಮಸ್ಯೆಯಾಗುತ್ತದೆ. ನಾರ್ಮಲ್ ಟ್ರೀಟ್‌ಮೆಂಟ್ ಮಾಡಿಸಿದರೆ ಸರಿಹೋಗಲ್ಲ.ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವಾದ ಮಂಡಿಸಿದ್ದಾರೆ.
ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ.ಚಿಕಿತ್ಸೆ ಪಡೆಯುವುದು ವ್ಯಕ್ತಿಯ ಮೂಲಭೂತ ಹಕ್ಕು ಎಂದಿದ್ದಾರೆ. ವಾದ-ವಿವಾದವನ್ನು ಆಲಿಸಿದ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.