ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಕೋರಿ ನೀಡಿದ ಅರ್ಜಿಯನ್ನು ಸೆ.27ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ನಟ ದರ್ಶನ್ ಅವರು ಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ. ಇದೇ ವೇಳೆಯಲ್ಲಿ A1ಆರೋಪಿಯಾಗಿರುವ ಪವಿತ್ರಾಗೌಡ ಜಾಮೀನು ಅರ್ಜಿಯನ್ನು ಕೂಡಾ ಸೆ.25ಕ್ಕೆ ಮುಂದೂಡಿ ಆದೇಶವನ್ನು ನೀಡಿದ್ದಾರೆ.
ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್‌ನ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.