ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪುಸ್ತಕಗಳ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಮರ್ಡರ್ ಕೇಸಿನಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದಾಗಿರುವ ಹಿನ್ನಲೆಯಲ್ಲಿ ದರ್ಶನ್ ಆಂಡ್ ಗ್ಯಾಂಗ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಅಥಿತಿಯಾಗಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ದಿನವನ್ನು ಕಳೆಯಲು ಇದೀಗ ಪುಸ್ತಗಳ ಮೊರೆ ಹೋಗಿದ್ದು, ಪುಸ್ತಕಗಳನ್ನು ನೀಡುವಂತೆ ಜೈಲಧಿಕಾರಿಗಳಿಗೆ ಮನವಿಯನ್ನು ಮಾಡಿದ್ದರು, ಅದರಂತೆಯೇ ಜೈಲಧಿಕಾರಿಗಳು ಗ್ರಂಥಾಲಯದಿಂದ ಪುಸ್ತಕಗಳನ್ನು ನೀಡಿದ್ದಾರೆ.ಜೈಲಿನ ಮೆನುವಿನ ಪ್ರಕಾರದಂತೆ ಊಟವನ್ನು ಸೇವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
