ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಗೌಪ್ಯ(confidential) ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿಗಳು ಹೊರ ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್‌ ಸಲ್ಲಿಕೆಯಾದ ನಂತರ ಲಾಯರ್‌ಗಳಿಗೆ ಒಂದು ಪ್ರತಿಯನ್ನು ನೀಡಲಾಗುತ್ತದೆ. ಸಹಜವಾಗಿಯೇ ಚಾರ್ಜ್‌ಶೀಟ್‌ನಲ್ಲಿರುವ ಮಾಹಿತಿಗಳು ಸೋರಿಕೆಯಾಗುತ್ತವೆ.(ಹೊರ ಬರುತ್ತವೆ) ಅದನ್ನು ತಡೆಯಲು ಯಾರಿಂದಲೂ ಸಾದ್ಯವಾಗುವುದಿಲ್ಲ.ಈ ವಿಷಯದ ಕುರಿತು  ಕೋರ್ಟ್ ಯಾವ  ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡೋಣ ಎಂದಿದ್ದಾರೆ.

ನ್ಯಾಯಾಲಯವು ವ್ಯಕ್ತಿಯ ಮಾತಿನ ವಿವರಣೆಯನ್ನು ಪರಿಗಣಿಸುವುದಿಲ್ಲ, ಬದಲಾಗಿ  ಸಾಕ್ಷಾಧಾರ, ಮತ್ತು ದಾಖಲೆಗಳ ಆಧಾರದ ಮೇಲೆ ಪ್ರಕರಣವನ್ನು ಪರಿಗಣಿಸುತ್ತದೆ. ಈ ಎಲ್ಲಾ ಮಾಹಿತಿಗಳನ್ನು ಪೊಲೀಸರು ತನಿಖೆ ನಡೆಸಿ ಮಾಹಿತಿಗಳನ್ನು ಕಲೆಹಾಕಿ ಉಲ್ಲೇಖಿಸಿರುವ ಚಾರ್ಜ್‌ಶೀಟ್, ಸಾಕ್ಷ್ಯಾಧಾರ, ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನೇಲ್ಲಾ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗುತ್ತದೆ. ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *