ಬಳ್ಳಾರಿ: ಸಂಡೂರು ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಅನ್ನಪೂರ್ಣ ತುಕಾರಾಂ ಗೆಲುವನ್ನು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧೀಕೃತ ಘೋಷಣೆಯಾಗುವುದು ಬಾಕಿಯಿದೆ ಎಂದು ತಿಳಿದುಬಂದಿದೆ.
ಅನ್ನಪೂರ್ಣರವರು ಬಿಜೆಪಿಯ ಅಭ್ಯರ್ಥಿ ಬಂಗಾರು ಹನುಮಂತುವಿಗಿಂತ 9000 ಕ್ಕೂ ಹೆಚ್ಚು ಮತಗಳಿಂದ ಗೆಲುವನ್ನು ಸಾಧಿಸಿದ್ದು, ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.