ಮೈಸೂರು: ಇತ್ತೀಚಿನ ದಿನಗಳಲ್ಲಿ ಸಿಎಂ ಬದಲಾವಣೆಯ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಇದರ ನಡುವೆ ಸತೀಶ್ ಜಾರಕಿಹೊಳಿಯವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು, ಮತ್ತು ಹೆಚ್.ಸಿ.ಮಹದೇವಪ್ಪನವರನ್ನು ಭೇಟಿ ಮಾಡಿರುವುದರ ಕುರಿತು ಎಲ್ಲರಲ್ಲೂ ಕುತೂಹಲ ಕೆರಳಿದೆ.
ಈ ವಿಚಾರದ ಕುರಿತು ಮಾತನಾಡಿರುವ ಸತೀಶ್‌ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯನವರೇ ಅಧಿಕಾರವನ್ನು ಮುಂದುವರೆಸಿಕೊಂಡು ಹೋಗ್ತಾರೆ. ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರ್ತಾರೆ, ಅವರು 5ವರ್ಷ ಮುಖ್ಯಮಂತ್ರಿಯಾಗಿ ಇರ್ತಾರೊ, ಅಥವಾ 3 ವರ್ಷ ಇರ್ತಾರೋ, ಅದೆಲ್ಲಾ ನನಗೆ ಗೊತ್ತಿಲ್ಲ. ಈ ವಿಚಾರವನ್ನು ಹೈಕಮಾಂಡ್ ಅವರ ಹತ್ತಿರ ಕೇಳಿ ಉತ್ತರ ಸಿಗುತ್ತೆ ಎಂದಿದ್ದಾರೆ.
ವಿಪಕ್ಷ ನಾಯಕರು ನನ್ನ ಮೇಲಿನ ಅಭಿಮಾನದಿಂದ ನನ್ನ ಹೆಸರನ್ನು ಮುನ್ನಲೆಗೆ ತರ್ತಾರೆ ಆದರೆ ಸಿಎಂ ವಿಚಾರದಲ್ಲಿ ಯಾವುದೇ ರೀತಿಯ ಬದಲಾವಣೆಯಾಗುವುದಿಲ್ಲ ಎಂದಿದ್ದಾರೆ.