ಬೆಂಗಳೂರು: ನಗರದಾದ್ಯಂತ ಹೆಚ್ಚು ಚಳಿ ಮತ್ತು ಮಂಜು ಕವಿದ ವಾತಾವರಣವಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ಬೆಂಗಳೂರಿನಲ್ಲಿ ಚಳಿಯೊಂದಿಗೆ ಮಂಜು ಕವಿದ ವಾತವರನವಿರುವುದರಿಂದ ಆರೋಗ್ಯದಲ್ಲಿ ವ್ಯತ್ಯಯವಾಗುವ ಸಾದ್ಯತೆಗಳು ಹೆಚ್ಚಿರುವುದರಿಂದ ಅದರ ಪರ್ಯಾಯವಾಗಿ ಬೆಚ್ಚಗಿನ ಉಡುಪುಗಳನ್ನು ಧರಿಸಿ, ಬೀಸಿ ಊಟ, ಬಿಸಿ ನೀರು ಸೇವಿಸಿ ಹೆಚ್ಚು ಉಷ್ಣತೆಯನ್ನು ಕಾಪಾಡಿಕೊಳ್ಳುವುದು ಒಳಿತು ಎಂದು ಮುಂದಾಲೋಚನೆಯ ಕ್ರಮವನ್ನು ಅನುಸರಿಸಬೇಕು ಎಂದು ವೈದ್ಯರು ಸಲಹೆಯನ್ನು ನೀಡಿದ್ದಾರೆ.

ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕೂಡಾ ದಟ್ಟವಾದ ಮಂಜು ಕಂಡುಬರುವ ಸಾದ್ಯತೆಗಳು ಹೆಚ್ಚಿರುವ ಕಾರಣ ವಾಹನ ಸವಾರರು ಎಚ್ಚರಿಕೆಯಿಂದ ವಾಹನಗಳ ಚಾಲನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

ಬೆಂಗಳೂರಿನ ತಾಪಮಾನವು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌ ಇದ್ದು, ಗರಿಷ್ಠ 28 ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ, ಕರಾವಳಿ ಜಿಲ್ಲೆಗಳಾಗಿರುವ ಉತ್ತರ ಕನ್ನಡ , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀಸರ್‌, ಬಲ್ಳಾರಿ ರಾಯಚೂರು, ವಿಜಯನಗರಗಳಲ್ಲಿ ಕಳೆದ ಕೆಲವು ದಿನಗಳಿಂದ ಒಣಹವೆಯ ವಾತವರಣ ಮುಂದುವರೆಯುತ್ತದೆ ಎಂದು ಇಲಾಖೆ ತಿಳಿಸಿದೆ.

ಚಳಿಗಾಲದಲ್ಲಿ ಚಿಕ್ಕವರಿಂದ ದೊಡ್ಡವರವರೆಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿದರೆ ಮುಂಬರುವ ಅಪಾಯದ ಮಟ್ಟವನ್ನು ಕಡಿಮೆ ಮಾಡಬಹುದು ಆದ್ದರಿಂದ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬಂದರೂ ವೈದ್ಯರನ್ನು ಭೇಟಿಮಾಡಿ ಸಲಹೆ ಸೂಚನೆಗಳನ್ನು ಪಡೆಯುವುದು ಉತ್ತಮ.

Leave a Reply

Your email address will not be published. Required fields are marked *