ಬೆಂಗಳೂರು: ಇನ್ನು 5 ವರ್ಷ ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಮುಂದುವರೆಸಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆಯನ್ನು ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು 5 ವರ್ಷಸಿದ್ದರಾಮಯ್ಯನವರೇ ಸಿಎಂ ಆಗಿ ಉಳಿಯುತ್ತಾರೆ . ಡಿಸಿಎಂ ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಡಿಕೆಶಿವಕುಮಾರ್ ಹೇಳಿದ ಮೇಲೆ ಬದಲಾವಣೆಯಾಗುವುದಿಲ್ಲ ಎಂದರ್ಥ.ಸಿದ್ದರಾಮಯ್ಯನವರೂ ಕೂಡಾ 5 ವರ್ಷ ನಾನೇ ಸಿಎಂ ಎಂದು ಹೇಳಿದ್ದಾರೆ. ಇವರಿಬ್ಬರು ಒಮ್ಮತದಿಂದ ಹೇಳಿಕೆ ನೀಡಿರುವಾಗ ಬದಲಾವಣೆಯಾಗುವುದಿಲ್ಲ ಎಂದಿದ್ದಾರೆ.
ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇವರು, ʼಈ ವಿಚಾರದ ಕುರಿತು ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆʼ ಯಾವಾಗ ಬೇಕಾದರೂ ಸಂಪುಟ ವಿಸ್ತರಣೆಯಾಗಬಹುದು ಎಂದು ಹೇಳಿದ್ದಾರೆ.
