ಬೆಂಗಳೂರು: ಕೋರ್ಟ್ ತೀರ್ಪು ನೀಡಿದ ನಂತರ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ ಬಿ.ಎಸ್ ಯಡಿಯೂರಪ್ಪ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತೀರ್ಪು ಬರುವ ಮುನ್ನವೇ ರಾಜೀನಾಮೆ ನೀಡಿದರೆ ಒಳಿತು ಎಂದು ಸಲಹೆಯನ್ನು ನೀಡಿದ್ದಾರೆ. ಸಿದ್ದರಾಮಯ್ಯನ ಮೇಲಿರುವ ಆರೋಪಗಳೆಲ್ಲವೂ ಸಾಬೀತಾಗುತ್ತವೆ ಆದ್ದರಿಂದ ಈ ವಿಷಯದಲ್ಲಿ ಯಾವ್ದೆ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾದ್ಯವಿಲ್ಲ ಎಂದಿದ್ದಾರೆ.
ಅದೇ ವೇಳೆಯಲ್ಲಿ ಕೋವಿಡ್ ಸಮಯದಲ್ಲಿ ನಡೆದಿರುವ ಹಗರಣಗಳ ಬಗ್ಗೆ ಮಾತನಾಡಿದ ಅವರು ಸರ್ಕಾರಕ್ಕೆ ತಿರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯವಿದೆ. ನಾವು ಯಾವುದೇ ಕಾರಣಕ್ಕೂ ಹೋರಾಟ ಮಾಡುವುದಿಲ್ಲವೆಂದಿದ್ದಾರೆ.