ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಜನತೆಗಾಗಿ ದುಡಿಯಬಹುದಿತ್ತು ಆದರೆ ಕೊಟ್ಟ ಕುದುರೆಯನ್ನೇರದ ವೀರನಲ್ಲ, ಶೂರನೂ ಅಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಟೀಕಿಸಿದ್ದರು.ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಉತ್ತರಿಸಿದ ಹೆಚ್.ಡಿ,ಕುಮಾರಸ್ವಾಮಿಯವರು ನನಗೆ ಯಾವ ಕುದುರೆಯನ್ನು ಕೊಟ್ಟಿದ್ದರು? ಎಂದು ಪ್ರಶ್ನೆಯನ್ನು ಮಾಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕೆ. ನಾನು 14 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ಜನರಿಗಾಗಿ ಮತ್ತು ಜನರ ಅಭಿವೃದ್ದಿಗಾಗಿ ಕೆಲ-ಕಾರ್ಯಗಳನ್ನು ಮಾಡಿದ್ದೇನೆ. ಇವರು ಸಿಎಂ ಆಗಿ ಯಾವ ಘನಂದಾರಿ ಕೆಲಸ ಮಾಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.
ಕುದುರೆಯ ವಿಷಯವನ್ನೇಳುವ ಸಿಎಂ, ನನಗೆ ಯಾವ ಕುದುರೆಯನ್ನು ಕೊಟ್ಟಿದ್ದರು? ಮುಡಾ ಹಗರಣದ ವಿಚಾರವನ್ನು ಮುಚ್ಚಿಹಾಕಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.