ಬೆಳಗಾವಿ:ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ರಾಜೀನಾಮೆ ನೀಡುವ ವಿಷಯವಾಗಲೀ, ಸಿಎಂ ಬದಲಾವಣೆಯ ವಿಷಯದ ಚರ್ಚೆಯಾಗಲೀ ನಡೆದಿಲ್ಲವೆಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕಾಗಿ ಯಾರು ಯಾರು ಆಕಾಂಕ್ಷಿಗಳಾಗಿದ್ದಾರೆ ಅದು ಅವರ ವೈಯಕ್ತಿಕ ವಿಚಾರ, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆಯ ಕುರಿತ ವಿಚಾರದ ಚರ್ಚೆಗಳು ನಡೆದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಹೈಕಮಾಂಡ್‌ನಿಂದ ಹಿಡಿದು ಕಾಂಗ್ರೆಸ್ ನಾಯಕರವರೆಗೂ ಸಿಎಂ ಸಿದ್ದರಾಮಯ್ಯನವರಿಗೆ ಬೆಂಬಲವನ್ನೂ ಸೂಚಿಸಿ, ಬೆಂಗಾವಲಾಗಿದ್ದಾರೆ. ಸಿಎಂ ಬದಲಾವಣೆಯ ವಿಚಾರಕ್ಕೆ ಸಂಬಂಧಿಸಿದಂತಹ ಸುದ್ದಿಗಳು ಹುಸಿ ಸುಳ್ಳು. ನಮ್ಮ ಪಕ್ಷದ ಮುಖ್ಯಮಂತ್ರಿಗಳಾಗಿ ಸಿಎಂ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ ಎಂದಿದ್ದಾರೆ.