ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತು ಅವರ ಪತ್ನಿಯ ವಿರುದ್ದ ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣರವರ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ ಅದರ ನಡುವೇಯೇ ದೂರನ್ನು ನೀಡಿದ ದೂರುದಾರನ ವಿರುದ್ದವೇ ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮುಡಾ ಹಗರಣದ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಸ್ನೇಹಮಯಿ ಕೃಷ್ಣರವರ ಮೇಲೆ ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ್ ದೂರನ್ನು ದಾಖಲಿಸಿದ್ದು ಕಾಂಗ್ರೆಸ್ ಪಕ್ಷದ ಮುಖಂಡರುಗಳೆಲ್ಲರೂ ಕೈ ಜೋಡಿಸಿ ಬೆಂಬಲವನ್ನು ಸೂಚಿಸಿದ್ದಾರೆ ಎನ್ನಲಾಗಿದೆ.