ಆನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕಾಲಿವುಡ್‌ನ ಸೂಪರ್‌ಸ್ಟಾರ್ ಆದ ರಜನಿಕಾಂತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಇನ್ನೇರಡು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ತಡರಾತ್ರಿ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಚೆನೈನ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾದ ಬಳಿಕ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದುಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವ ವಿಷಯವನ್ನು ವೈದ್ಯರು ಖಾತರಿಪಡಿಸಿದ ನಂತರ ಅವರನ್ನು 2-3 ದಿನಗಳಲ್ಲಿ ಡಿಸ್ಚಾರ್ಜ್ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈ ಹಿಂದೆ ನಟ ರಜನಿಕಾಂತ್‌ರವರಿಗೆ 2020ರಲ್ಲಿ ಬಿ.ಪಿ.ಹೆಚ್ಚಾಗಿರುವ ಕಾರಣ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.