ಬೆಂಗಳೂರು: ವಿಜಯಲಕ್ಷ್ಮಿ ದರ್ಶನ್‌ರವರಿಗೆ ಸಾಮಾಜಿಕ ಜಾಲಾತಾಣಗಳಲ್ಲಿ ಅಶ್ಲೀಲ ಕಮೆಂಟ್ ಮಾಡುವ ಕಿಡಿಗೇಡಿಗಳ ವಿರುದ್ದ ಪೊಲೀಸ್ ಠಾಣೆಗೆ ದೂರನ್ನು ದಾಖಲಿಸಿದ್ದರು.ಇದೀಗ ಈ ಪ್ರಕರಣ ಕೊನೆಯ ಹಂತಕ್ಕೆ ತಲುಪಿದೆ ಎಂದು ತಿಳಿದುಬಂದಿದೆ.

ವಿಜಯಲಕ್ಷ್ಮಿ ದರ್ಶನ್‌ಗೆ ಸೋಚಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 6 ಮಂದಿ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಸುದೀಪ್ ಅಭಿಮಾನಿಗಳು ಎಂದು ತಿಳಿದುಬಂದಿದೆ.

ಪೊಲೀಸರು ಬಂಧಿಸಿರುವ ಆರೋಪಿಗಳಲ್ಲಿ ಸಾಪ್ಟ್‌ವೇರ್ ಇಂಜಿನಿಯರ್ ಮತ್ತು ಪೆಟ್ರೋಲ್ ಬಂಕ್ ಮ್ಯಾನೇಜರ್ ಕೂಡಾ ಇದ್ದಾರೆ. ಈ ಕಿಡಿಗೇಡಿಗಳ ವಿರುದ್ದ 60 ದಿನಗಳಲ್ಲಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಬೇಕಿತ್ತು.ಆದ್ದರಿಂದ ಬಂಧಿತ ಆರೋಪಿಗಳ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿ ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಉಲ್ಲೇಖವಾಗಿದೆ ಎನ್ನಲಾಗಿದೆ.
