ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ವಿಚಾರಗಳು ಕೇಳಿಬರುತ್ತಿದ್ದು, ಈ ಎಲ್ಲಾ ಗೊಂದಲಗಳಿಗೆ ಬ್ರೇಕ್ಪಾಸ್ಟ್ ಮೀಟಿಂಗ್ ಮಾಡುವುದರ ಮೂಲಕ ಎಲ್ಲಾ ಗೊಂದಲಗಳಿಗೂ ಪುಲ್ಸ್ಟಾಪ್ ಇಟ್ಟಿದ್ದರು. ಅದರ ಬೆನ್ನಲ್ಲೇ ಸಿಎಂ ಬದಲಾವಣೆಯಿಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯುತ್ತಾರೆ. ರಾಜ್ಯ ರಾಜಕೀಯದಲ್ಲಿ ಯಾವುದೇ ರೀತಿಯ ಬದಲಾವಣೆಯಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಪಟ್ಟ ಏರುವುದಕ್ಕಾಗಿ ಕದನಗಳು, ಯುದ್ದಗಳು, ವಾಕ್ಸಮರಗಳು ನಡೆಯುವ ಬೆನ್ನಲೇ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
