ಬೆಂಗಳೂರು: ಜೀವ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಆರ್. ನಗರದ ಬಿಜೆಪಿ ಶಾಸಕರಾದ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಗುತ್ತಿಗೆದಾರ ಚೆಲುವರಾಜ್ ತನಗೆ ಜೀವ ಬೆದರಿಕೆ ಇದೆ, ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ಎರಡು ಪ್ರಕರಣವನ್ನು ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ ಎನ್ನಲಾಗಿದೆ.
ಈ ಜೀವ ಬೆದರಿಕೆ ಆರೋಪ ಪ್ರಕರಣದಲ್ಲಿ ಒಟ್ಟು ನಾಲ್ವರು ಭಾಗಿಯಾಗಿದ್ದು ಎ1 ಆರೋಪಿಯಾಗಿ ಶಾಸಕ ಮುನಿರತ್ನ ಆದರೆ. ಎ2 ಆಪ್ತ ಸಹಾಯಕ ವಿಜಯ್ ಕುಮಾರ್, ಎ3 ಸೆಕ್ಯೂರಿಟಿ ಅಭಿಷೇಕ್ ಹಾಗೂ ಎ4 ವಸಂತ್ ಕುಮಾರ್ ಎನ್ನುವವರು ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಗುತ್ತಿಗೆದಾರ ಚಲುವರಾಜು ನನಗೆ ಕೊಲೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದರವರಿಗೆ ದೂರನ್ನು ನೀಡಿದ್ದು ತನ್ನನ್ನು ರಕ್ಷಿಸುವಂತೆ ಮನವಿಯನ್ನು ಮಾಡಿದ್ದಾರೆ.