ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ”ಯ ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಯಾಗಿ 65 ನೂತನ ಅಂಬ್ಯುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ ವಾಹನ ಸವಾರರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಅಪಘಾತಗಳು ಸಂಭವಿಸಿದ 1 ಗಂಟೆಯೊಳಗೆ ತುರ್ತು ಚಿಕಿತ್ಸೆ ದೊರಕಿದರೆ ಎಷ್ಟೋ ಪ್ರಾಣಗಳು ಉಳಿಯುತ್ತವೆ ಆದ್ರಿಂದ ಗೋಲ್ಡನ್ ಹವರ್ ಅಂಬ್ಯುಲೆನ್ಸ್ಗಳು ಪ್ರಾಣ ಉಳಿಸುವ ಕಾರ್ಯಕ್ಕೆ ನೆರವಾಗುತ್ತವೆ ಎಂದು ತಿಳಿಸಿದ್ದಾರೆ.
ಸದ್ಯ 65 ಅಂಬ್ಯಲೆನ್ಸ್ಗಳನ್ನು ಲೋಕಾರ್ಪಣೆ ಮಾಡಿದ್ದು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ ಎಂದಿದ್ದಾರೆ.
ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಯಾವ ಅಪಘಾತಗಳು ನಡೆಯುವುದಿಲ್ಲ. ಮಧ್ಯಪಾನ ಮಾಡಿ ವಾಹನಗಳನ್ನು ಚಲಾಯಿಸಬೇಡಿ ನಿಮಗೂ ಕುಟುಂಬವಿರುತ್ತದೆ, ನಿಮ್ಮ ಕುಟುಂಬದವರನ್ನು ಅನಾಥರನ್ನಾಗಿ ಮಾಡಬೇಡಿ ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ ಎಂದು ಹೇಳಿದ್ದಾರೆ.
ಕುಡಿದು ವಾಹನ ಚಲಾಯಿಸಿದರೆ, ಮೊಬೈಲಿನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದರೆ ,ಮತ್ತು ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಪಾಲನೆ ಮಾಡದಿದ್ದರೆ ಅಂತಹವರ ಲೆಸೆನ್ಸ್ಗಳನ್ನು ರದ್ದು ಮಾಡಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸೂಚನೆಯನ್ನು ನೀಡಿದ್ದಾರೆ.