ಬೆಂಗಳೂರು: ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮನವಿಯನ್ನು ಮಾಡಿದ್ದಾರೆ.

ನೌಕರರ ಮುಷ್ಕರದ ಬಗ್ಗೆ ಮಾತನಾಡಿದ ಡಿಕೆಶಿ, ಸಾರಿಗೆ ನೌಕರರು ತಮ್ಮ ಬೇಡಿಕೆ ಮುಂದಿಟ್ಟಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಹಠ ಮಾಡುವುದು ಬೇಡ. ಈ ವಿಚಾರದ ಕುರಿತು ಸಭೆ ನಡೆಸುತ್ತೇವೆ ಆದ್ದರಿಂದ ಸಾರಿಗೆ ನೌಕರರು ಸಹಕಾರ ನೀಡಬೇಕು ಮತ್ತು ಸರ್ಕಾರದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಹೇಳಿದ್ದಾರೆ.

ಈಡೇರಿಸಲಾಗದ ಬೇಡಿಕೆಗಳನ್ನಿಟ್ಟುಕೊಂಡು ಮುಷ್ಕರ ಮಾಡುವುದು ಸರಿಯಲ್ಲ. ಸಾರ್ವಜನಿಕರ ಹಿತ ಮುಖ್ಯ ಎಂದಿದ್ದಾರೆ.

Leave a Reply

Your email address will not be published. Required fields are marked *