ಬೆಂಗಳೂರು: ವಾಲ್ಮೀಕಿ ನಿಗಮದ ಅಭಿವೃದ್ದಿಯ ಹಣವನ್ನು ಲೂಟಿ ಹೊಡೆದು ನಾಡಿನ ಎಲ್ಲಾ ಎಸ್‌ಟಿ ಸಮುದಾಯಗಳಿಗೆ ದ್ರೋಹ ಮಾಡಿರುವ ಕಾಂಗ್ರೆಸ್‌ಗೆ ವಾಲ್ಮೀಕಿ ಜಯಂತಿಯನ್ನು ಆಚರಿಸುವ ನೈತಿಕತೆಯಿಲ್ಲ. ಕಾಂಗ್ರೆಸ್ಸಿಗರು ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ.
ವಾಲ್ಮೀಕಿ ನಿಗಮಕ್ಕೆ ಕಾಂಗ್ರೆಸ್ ಸರ್ಕಾರ ಮಾಡಿರುವ ದ್ರೋಹವನ್ನು ಮುಚ್ಚಿಹಾಕಲು ವಾಲ್ಮೀಕಿ ಜಯಂತಿ ಮಾಡುವ ನಾಟಕ ಮಾಡುತ್ತಿದ್ದು , ಪತ್ರಿಕೆ ಮತ್ತು ಜಾಹೀರಾತುಗಳನ್ನು ನೀಡುವುದರ ಮೂಲಕ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ.
ರಾಜ್ಯ ಬಿಜೆಪಿ ಘಟಕವೂ ಕಾಂಗ್ರೆಸ್ ಸರ್ಕಾರ ಮಾಡಿರುವ ಅಕ್ರಮವನ್ನು ಸಾಮಾಜಿಕ ಜಾಲಾತಾಣದಲ್ಲಿ ಜಾಹೀರಾತಿನ ಮೂಲಕ ಪ್ರಕಟಿಸಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.
