ವಿಧಾನಸೌಧದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯ ಸಮಯದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಶಾಕುಂತಲಾ ನಾಟಕವನ್ನು ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತವನ್ನು ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣವನ್ನು ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು ಎಂದು ಹೇಳಿದ ಅವರು ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದಿದ್ದಾರೆ.ವಾಲ್ಮೀಕಿ ಸಮುದಾಯದಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಎನ್ನುವ ತತ್ವಗಳನ್ನು ಸಾರಿದ್ದು ವಾಲ್ಮೀಕಿ ಮಹರ್ಷಿಗಳು.

ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ.ನಾವು ಜಾರಿಗೊಳಿಸಿದ ಬಡ್ತಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು.ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು, ನೀವು ಸಲ್ಲಿಸುವ ಗೌರವ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *