ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ನಡೆಸಿರುವ ಇಡಿ ಅಧಿಕಾರಿಗಳಿಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು,ಈ ಪ್ರಕಣದಲ್ಲಿ ಮಾಜಿ ಸಚಿವರಾದ ಬಿ.ನಾಗೇಂದ್ರರವರೇ ಮಾಸ್ಟರ್ ಮೈಂಡ್ ಎಂಬ ಮಾಹಿತಿಯನ್ನ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ನ್ನು ಸಲ್ಲಿಸಿದ್ದು, ಈ ಪ್ರಕರಣದ ಮಾಸ್ಟರ್ ಮೈಂಡ್ ಬಿ.ನಾಗೇಂದ್ರ ಎಂದು ಉಲ್ಲೆಖಿಸಿದ್ದಾರೆ .
ಈ ಹಗರಣದಲ್ಲಿ ಕೋಟಿ ಕೋಟಿ ಹಣ ಲೂಟಿಯೊಡೆದು ಅಕ್ರಮವನ್ನು ಮಾಡಿದ್ದಾರೆಂದು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಿ.ನಾಗೇಂದ್ರರನ್ನು ಬಂಧಿಸಲಾಗಿತ್ತು ನಂತರ ಕೋರ್ಟ್ಗೆ ಕಸ್ಟಡಿಗೆ ನೀಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಎನ್ನಲಾಗಿದೆ.