ಬೆಂಗಳೂರು: 3 ಕ್ಷೇತ್ರಗಳ ಬೈ ಎಲೆಕ್ಷನ್‌ಲ್ಲಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಬೈಎಲೆಕ್ಷನ್ ಪ್ರಚಾರದ ವೇಳೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ನವೆಂಬರ್ 4ರಿಂದ 11 ರವರೆಗೆ ಮೂರೂ ಕ್ಷೇತ್ರಗಳಲ್ಲಿ ಪ್ರಚಾರವನ್ನು ಮಾಡಲಿದ್ದು, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.
ಅಜ್ಜಂಪೀರ್ ಖಾದ್ರಿಗೆ ಶಿಗ್ಗಾವಿಯಲ್ಲಿ ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ ಪಡೆಯುವಂತೆ ಸೂಚನೆಯನ್ನು ನೀಡಿದ್ದೇವು.ಆದ್ರರಿಂದ ನಾಮಪತ್ರವನ್ನು ವಾಪಸ್ ಪಡೆದಿದ್ದರು, ಆದರೆ ಕಾಂಗ್ರೆಸ್ಸಿನವರು ಅಜ್ಜಂಪೀರ್ ಖಾದ್ರಿಯವರನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಕುಮಾರಸ್ವಾಮಿಯವರು ಸುಳ್ಳು ಹೇಳಿಕೊಂಡು ಒಡಾಡುತ್ತಾರೆ ಅವರಿಗೆ ಸುಳ್ಳು ಹೇಳುವುದು ಬಿಟ್ಟು ಇನ್ನೇನು ಇಲ್ಲ. ಎಂದಿದ್ದಾರೆ.