ಮಡಿಕೇರಿ: ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಯದುವೀರ್ ಒಡೆಯರ್ ಹೇಳಿಕೆ ನೀಡಿದ್ದಾರೆ.
ಬಾನು ಮುಷ್ತಾಕ್ರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆಇದೇ ವಿಚಾರಕ್ಕೆ ಪ್ರತಿಕ್ರಿಯಿಸಿದ ಯದುವೀರ್ ಬಾನು ಮುಷ್ತಾಕ್ರವರು ಬರಹಗಾರರು. ಅಂತರಾಷ್ಟ್ರೀಯ ಮಟ್ಟದಲ್ಲಿ ಬೂಕರ್ ಪ್ರಶಸ್ತಿಯನ್ನು ಪಡೆದಿರುವ ಇವರು ಸಾಮಾಜಿಕ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೂ ಸಮಾನ ಹಕ್ಕನ್ನುನೀಡಬೇಕು.
ಬಿಜೆಪಿ ನಾಯಕರ ವಿರೋಧಕ್ಕೆ ಪ್ರತಿಕ್ರಿಯಿಸಿದ ಇವರು, ನಾವು ಸರ್ಕಾರಿ ಕಾರ್ಯಕ್ರಮಗಳಿಗೆ ಪೂಜೆಯನ್ನು ಸಲ್ಲಿಸುತ್ತೇವೆ.ನಾವು ಧಾರ್ಮಿಕ ಪೂಜೆಗಳನ್ನು ನಮ್ಮನಮ್ಮ ಮನೆಗಳಲ್ಲಿ ಮಾಡಿಕೊಳ್ಳುತ್ತೇವೆ. ಹಾಗೆಯೇ ಸರ್ಕಾರಕ್ಕೆ ಇದೊಂದು ಉತ್ಸವ.ಬಾನು ಮುಷ್ತಾಕ್ ಆಯ್ಕೆಯ ಬಗ್ಗೆ ನನಗೆ ವಿರೋಧವಿಲ್ಲವೆಂದು ಹೇಳಿದ್ದಾರೆ.
