ವಿಜಯಪುರ:ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಲ್ಲಿರುವ ಬಸವರಾಜ್ ಯತ್ನಾಳ್ ವಿರುದ್ದ ವಿಜಯಪುರದ ಗಾಂಧಿಚೌಕ್ ಠಾಣೆಯಲ್ಲಿ ದೂರ ದಾಖಲಾಗಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಸಂಸದ ರಾಹುಲ್ ಗಾಂಧಿಯವರನ್ನು ಅ.15 ವಿಜಯಪುರದ ಸಿದ್ದೇಶ್ವರ ಗುಡಿ ವಕ್ಫ್ ಹಠಾವೋ, ದೇಶ ಬಚಾವೋ ಎನ್ನುವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವ ವೇಳೆ ಅವಾಚ್ಯ ಶಬ್ದಗಳನ್ನು ಬಳಕೆಮಾಡಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ .
ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮನೆ ಎಂಬುವವರು ಯತ್ನಾಳ್ ವಿರುದ್ದ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.