ವಯಾನಾಡ್ :ಕೇರಳದ ವಯಾನಾಡ್ ಬೈ ಎಲೆಕ್ಷನ್ ನವೆಂಬರ್ 13ರಂದು ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಗಾಂಧಿ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಪ್ರಿಯಾಂಕಗಾಂಧಿಯವರು ಇದೇ ಮೊದಲ ಬಾರಿಗೆ ಸ್ಪರ್ಧೆ ಮಾಡಲಿದ್ದು, ಇಂದು ನಾಮಪತ್ರಿಕೆಯಲ್ಲಿ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಗಾಂಧಿ ರೋಡ್ ಶೋ ನಡೆಸಿದ್ದಾರೆ.
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷನಾಯಕರಾದ ರಾಹುಲ್‌ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಪ್ರಿಯಾಂಕಗಾಂಧಿ ಪತಿಯಾದ ರಾನರ್ಟ್ ವಾದ್ರಾ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಉಪಸ್ಥಿತರಿದ್ದರು.