ಹೊಸ ವರ್ಷ ಮುಂದಿನ ದಿನ ಉತ್ತರ ಪ್ರಧೆಶದ ನೋಯ್ಡಾದಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಯುವಕ ನೃತ್ಯ ಮಾಡುವ ನಾಟಕೀಯ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಟ್ರಾಫಿಕ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರು ಘಟನೆಯನ್ನು ಸೆರೆಹಿಡಿದು ಸಾಮಾಜಿಕ ಜಾಲಾತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಆಕ್ಷನ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಡಿಸೆಂಬರ್ 31ರ ರಾತ್ರಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳ ನಿಕರವಾಗಿ ತಿಳಿದುಬಂದಿಲ್ಲ. ವೈರಲ್ ಆಗಿರುವ ವಿಡಿಯೋ ಪ್ರಕಾರ ಮಾರುತಿ ಆಲ್ಟೋ ಕಾರು ಚಲಿಸುತ್ತಿರುವಾಗ ಯುವಕರು ಡ್ಯಾನ್ಸ್ ಮಾಡಿದ್ದಾರೆ.
